ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/
ಕೃಷ್ಣಪಕ್ಷ/ನವಮಿ ತಿಥಿ/
ಮಂಗಳವಾರ/ಪೂರ್ವಾಭಾದ್ರಾ ನಕ್ಷತ್ರ /
ದಿನಾಂಕ: 28.05.2019
°~•~°~•~°~•~°~•~°~•~°
ಮೇಷ
ಉತ್ತಮ ಶ್ರದ್ಧೆಯಿಂದ ಕೆಲಸವನ್ನು ತೊಡಗಿಸಿಕೊಳ್ಳಿ. ಆರ್ಥಿಕವಾಗಿ ಉತ್ತಮ ಅಭಿವೃದ್ಧಿ ಕಂಡು ಬರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತವೆ. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದುಂದುವೆಚ್ಚ ಮಾಡದಿರಿ. ಆರೋಗ್ಯ ಸಂಬಂಧಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಉದಾಸೀನತೆಯನ್ನು ಬಿಟ್ಟು ಕೆಲಸವನ್ನು ಮಾಡಿ. ಕೈಗೆ ಬಂದಿರುವ ಹಣವನ್ನು ದುಂದುವೆಚ್ಚ ಮಾಡಿ ಕಳೆಯಬೇಡಿ. ಗಂಡ-ಹೆಂಡಿರ ನಡುವೆ ಜಗಳಗಳನ್ನು ತರಬೇಡಿ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಆರ್ಥಿಕವಾದ ಮುನ್ನಡೆ ದೊರೆಯಲಿದೆ. ದಾಂಪತ್ಯಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ನಿಮ್ಮ ವ್ಯವಹಾರ ಕ್ಷಮತೆಯಿಂದಾಗಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ತೊಡಗಿಸಿಕೊಂಡ ಕೆಲಸದಲ್ಲಿ ವಿಘ್ನಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಮೋಸ ಹೋಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ವ್ಯವಹರಿಕವಾದ ಮುನ್ನಡೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತವೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ಪುತ್ರನ ಆಗಮನದಿಂದಾಗಿ ಸಂತೋಷ ದೊರೆಯುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ನಡೆಯಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಹಿನ್ನಡೆಯಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಿಸಬೇಕಾಗುವ ದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಗಾವಹಿಸಿ. ದಾಂಪತ್ಯ ಜೀವನದಲ್ಲಿ ಕಲಹ ಏರ್ಪಡುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ವ್ಯವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ ಉಂಟಾದೀತು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುನ್ನಡೆಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ ಸಣ್ಣಪುಟ್ಟ ತೊಂದರೆಗಳ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ವ್ಯವಹಾರದಲ್ಲಿ ಆಲಸ್ಯವನ್ನು ತೋರಬೇಡಿ. ಹಣಕಾಸಿನ ವಿಚಾರದಲ್ಲಿಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆ ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}