ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ /ದ್ವಾದಶೀ ತಿಥಿ/
ಶುಕ್ರವಾರ/ ಮೂಲಾ ನಕ್ಷತ್ರ /
ದಿನಾಂಕ: 01.02.2019
°~•~°~•~°~•~°~•~°~•~°
ಮೇಷ
ಕೆಲಸ ಕಾರ್ಯಗಳಲ್ಲಿ ಉತ್ತಮ ಬೆಳವಣಿಗೆ. ಹಣಕಾಸಿನ ವಿಚಾರದಲ್ಲಿ ಏಳಿಗೆ. ಆರೋಗ್ಯದಲ್ಲಿ ಚೇತರಿಕೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ:
ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||
°~•~°~•~°~•~°~•~°~•~°
ವೃಷಭ
ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆ. ಹಣಕಾಸಿನ ವಿಚಾರದಲ್ಲಿ ತೊಡಕು. ದಾಂಪತ್ಯದಲ್ಲಿ ಕಲಹ. ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:
°~•~°~•~°~•~°~•~°~•~°
ಮಿಥುನ
ವ್ಯಾವಹಾರಿಕ ಕ್ಷೇತ್ರದಲ್ಲಿ ಅತ್ಯುತ್ತಮ ಬದಲಾವಣೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ. ವಿವಾಹಾಕಾಂಕ್ಷಿಗಳಿಗೆ ವಿವಾಹ ಯೋಗ ಒದಗಿ ಬರಲಿದೆ. ನೂತನ ಗೃಹಪಯೋಗಿ ವಸ್ತುಗಳು ಅಲಂಕಾರಿಕ ವಸ್ತುಗಳು ಮುಂತಾದವನ್ನು ಖರೀದಿಸಲು ಸುದಿನ. ಉದರ ಸಂಬಂಧಿ ತೊಂದರೆ ಕಂಡುಬರಲಿದ್ದು ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ಶ್ರೀಕೃಷ್ಣನ ಆರಾಧನೆಯಿಂದ ಶುಭ.
ಜಪಿಸಲು:
ವಸುದೇವಸುತಂ ದೇವಂ
ಕಂಸಚಾಣೂರಮರ್ದನಮ್|
ದೇವಕೀಪರಮಾನನ್ದಂ
ಕೃಷ್ಣಂ ವನ್ದೇ ಜಗದ್ಗುರುಮ್ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗಕ್ಷೇತ್ರಗಳಲ್ಲಿ ನಿಧಾನಗತಿಯ ಹಿನ್ನಡೆ. ಅನಾರೋಗ್ಯವು ಕೆಲಸಗಳಿಗೆ ಹಿನ್ನಡೆ ತರುವುದು. ಶೀತ ಜ್ವರ ಕಫ ಮುಂತಾದ ತೊಂದರೆಗಳು ಬಾಧಿಸುವುದು. ದಾಂಪತ್ಯ ಜೀವನದಲ್ಲಿ ಕಲಹ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋಸ್ತುತೇ ||
°~•~°~•~°~•~°~•~°~•~°
ಸಿಂಹ
ನೂತನ ಕಾರ್ಯವೈಖರಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಮೆರೆಯವಿರಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಶತ್ರುಭಯ, ಚೋರ ಭಯ ಒದಗಿಬರುವುದು. ದಾಂಪತ್ಯ ಜೀವನದಲ್ಲಿ ಕಲಹ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ, ಸ್ವಪ್ರಯತ್ನದಿಂದ ಮೇಲೆ ಬರುವ ಅವಕಾಶವಿದೆ.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ
°~•~°~•~°~•~°~•~°~•~°
ಕನ್ಯಾ
ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ. ಹಣಕಾಸಿನ ವಿಚಾರದಲ್ಲಿ ಏಳಿಗೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗಿ ಬಂದರೂ, ಸಹಾಯ ಒದಗಿ ಬರಲಿದೆ. ಆರ್ಥಿಕ ಮುನ್ನಡೆ ಸಾಧಿಸುವಿರಿ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ
°~•~°~•~°~•~°~•~°~•~°
ವೃಶ್ಚಿಕ
ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ಆಹಾರದಿಂದ ಆರೋಗ್ಯ ಹದಗೆಡುವ ಲಕ್ಷಣಗಳಿದ್ದು ಆಹಾರದ ಬಗ್ಗೆ ನಿಗಾ ಇರಲಿ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ.
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಂ
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°~•~°~•~°~•~°~•~°~•~°
ಧನು
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಹಾಗೂ ಬದಲಾವಣೆಗಳು ಕಂಡುಬರಲಿದ್ದು ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಹೊಂದುವಿರಿ. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°~•~°~•~°~•~°~•~°~•~°
ಮಕರ
ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಹಿನ್ನಡೆ. ಅನಗತ್ಯ ವಿಚಾರಗಳಿಗೆ ತಲೆ ಹಾಕಬೇಡಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಕಂಡುಬರಲಿದೆ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ
°~•~°~•~°~•~°~•~°~•~°
ಕುಂಭ
ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದಿಂದ, ಏಕಾಗ್ರತೆಯಿಂದ ಮುಂದುವರಿದಲ್ಲಿ ಮಾತ್ರ ಶುಭ ಫಲ.
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಂ
ಕಿಂ ನೋ ಮೃತ್ಯುಃ ಕರಿಷ್ಯತಿ ||
°~•~°~•~°~•~°~•~°~•~°
ಮೀನ
ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ವಿನಾಕಾರಣ ಖರ್ಚುವೆಚ್ಚ ಒದಗಿಬರುವುದು. ಆರೋಗ್ಯದಲ್ಲಿ ಸುಧಾರಣೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು:
ಶಾಂತಾಕಾರಂ ಭುಜಗಶಯನಂ
ಪದ್ಮನಾಭಂ ಸುರೇಶಂ
ವಿಶ್ವಾಧಾರಂ ಗಗನಸದೃಶಂ
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಂ
ಯೋಗಿಹೃದ್ಧ್ಯಾನಗಮ್ಯಂ
ವಂದೇ ವಿಷ್ಣುಂ ಭವಭಯಹರಂ
ಸರ್ವಲೋಕೈಕನಾಥಮ್ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}