ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಭಾದ್ರಪದ ಮಾಸ/
ಶುಕ್ಲಪಕ್ಷ/ಏಕಾದಶಿ ತಿಥಿ/
ಸೋಮವಾರ/ಪೂರ್ವಾಷಾಢ ನಕ್ಷತ್ರ /
ದಿನಾಂಕ 09.09.2019
°~•~°~•~°~•~°~•~°~•~°
ಮೇಷ
ಉತ್ತಮ ಪರಿಶ್ರಮ ಹಾಗೂ ಜಾಣ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿಕೊಂಡು ಬರಬೇಕು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವ ದರಿಂದ ಜಾಗರೂಕತೆಯಿಂದ ಇರಬೇಕು. ಮಾನಸಿಕ ನೆಮ್ಮದಿ ಕುಟುಂಬ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಕಂಡುಬರುವುದು
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಆರೋಗ್ಯದಲ್ಲಿ ಏರುಪೇರು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತದೆ
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ಹಣಕಾಸಿನ ವಿಚಾರಗಳು ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ವಾಹನ ಪ್ರಯಾಣದ ಸಂದರ್ಭಗಳಲ್ಲಿ ದೂರ ಪ್ರಯಾಣದ ಸಂದರ್ಭದಲ್ಲಿ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು. ಆರೋಗ್ಯದಲ್ಲಿ ಏರುಪೇರು ಸಂಭವಿಸುತ್ತದೆ
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಹಾಯ ಒದಗಿಬರುತ್ತದೆ ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರುತ್ತದೆ
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ ಖರ್ಚುವೆಚ್ಚವನ್ನು ಎದುರಿಸಬೇಕಾಗುತ್ತದೆ. ದುಂದುವೆಚ್ಚ ಮಾಡದಿರಿ.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಮಾಡುವಂತಹಾ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳೇ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಅಂತರ ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ನಿರ್ವಹಿಸಿ.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಧಾನದಲ್ಲಿ ತೊಂದರೆಗಳು ಎದುರಾಗುತ್ತದೆ. ಸಾಲ ಮಾಡಬೇಕಾದಂತಹ ಪರಿಸ್ಥಿತಿ ಒದಗಿ ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಉತ್ತಮ ಪರಿಶ್ರಮದಿಂದ ಆಲಸಿತನ ವನ್ನು ಬಿಟ್ಟು ಮುನ್ನಡೆಯಿರಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುತ್ತದೆ
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. :
ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}