|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

17.02.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ /ತ್ರಯೋದಶಿ ತಿಥಿ/

ರವಿವಾರ/ ಪುನರ್ವಸು ನಕ್ಷತ್ರ /

ದಿನಾಂಕ: 17.02.2019

 °~•~°~•~°~•~°~•~°~•~°

ಮೇಷ

        ವ್ಯವಹಾರ ಚತುರತೆಯಿಂದ ಮಾಡುವ ಕೆಲಸದಲ್ಲಿ ಉತ್ತಮ ಹೆಸರು ಗಳಿಸುವಿರಿ. ಉದ್ಯೋಗದಲ್ಲಿ ಬಡ್ತಿ ದೊರೆಯುವುದು. ಗಳಿಸಿದ ಹಣವನ್ನು ಉತ್ತಮ ಕಾರ್ಯಗಳಿಗೋಸ್ಕರ ವಿನಿಯೋಗಿಸಿ. ದಂಪತಿಗಳು ಒಬ್ಬರನ್ನೊಬ್ಬರು ಅರಿತುಕೊಂಡು ಮುಂದುವರಿಯಬೇಕು. ಚರ್ಮರೋಗ, ದೇಹದಲ್ಲಿ ಉಷ್ಣತೆ, ಜ್ವರ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಲಸ್ಯ ಬಿಟ್ಟು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಸರಕಾರಿ ಕೆಲಸ, ಅಧ್ಯಾಪಕ ವೃತ್ತಿ  ಮುಂತಾದ ಕೆಲಸವನ್ನು ಮಾಡುವವರಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಕಫ, ಜ್ವರ, ತಲೆನೋವು, ಗುಹ್ಯರೋಗ, ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಏಳಿಗೆಯನ್ನು ಪಡೆದು ಗುರುಹಿರಿಯರ ಪ್ರಶಂಸೆಗೆ ಒಳಗಾಗುವಿರಿ.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು:
ಸರ್ವದೇವಮಯೇ ದೇವಿ

ಸರ್ವದೇವೈ-ರಲಂಕೃತೇ |
ಮಾತರ್ಮಮಾ-ಭಿಲಷಿತಂ

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಕೆಲಸದಲ್ಲಿ ಉತ್ತಮ ಅಭಿವೃದ್ಧಿಯ ಲಕ್ಷಣಗಳು ಕಂಡುಬರುವುದರಿಂದ ಆಲಸ್ಯ ಬಿಟ್ಟು ಮುಂದುವರಿಯಿರಿ. ಮನಶ್ಶಾಂತಿ ದೊರೆಯುವುದು. ಆರ್ಥಿಕವಾಗಿ ಉತ್ತಮ ಅಭಿವೃದ್ಧಿ ಕಂಡುಬರುವುದು.  ಕುಟುಂಬದ ಏಳಿಗೆಗೋಸ್ಕರ ಹಣವನ್ನು ವಿನಿಯೋಗಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು:
ದೇವತಾಕಾರ್ಯ-ಸಿದ್ಧ್ಯರ್ಥಂ

ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಂ

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಭೂ ಸಂಬಂಧಿ, ಜಲ ಸಂಬಂಧಿ ಕೆಲಸ ಮಾಡುವವರಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳಿರುವುದರಿಂದ ಜಾಗರೂಕರಾಗಿರಬೇಕು. ಹಣಕಾಸಿನ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಶೀತ, ಜ್ವರ, ಕಫ ಮೊದಲಾದ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಮನಶ್ಶಾಂತಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆಗಳು ಕಂಡುಬರುವುದು. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುವುದು. ಗೃಹೋಪಯೋಗಿ ವಸ್ತುಗಳು ಖರೀದಿಸಲು ಸಂದರ್ಭ ಒದಗಿಬರುವುದು. ಉತ್ತಮ ಆರೋಗ್ಯ ಪಡೆಯುವಿರಿ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ|
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


    ಶ್ರದ್ಧೆ ಹಾಗೂ ಏಕಾಗ್ರತೆಯಿಂದ  ಕೆಲಸದಲ್ಲಿ ತೊಡಗಿಸಿಕೊಳ್ಳಿ. ಸಣ್ಣಪುಟ್ಟ ಅಡೆತಡೆಗಳನ್ನು ಕೆಲಸ ಕಾರ್ಯಗಳಲ್ಲಿ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ-ನೆಮ್ಮದಿ ದೊರೆಯುತ್ತದೆ.  ಹಣಕಾಸಿನ ವಿಚಾರದಲ್ಲಿ ಲಾಭ ಇದ್ದರೂ ಕೂಡ ಖರ್ಚುವೆಚ್ಚ ಒದಗಿಬರುವುದು. ಮೈ ಕೈ ನೋವು, ಮಲಬದ್ಧತೆ, ಬೆನ್ನು ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯ ಬಿಟ್ಟು, ಏಕಾಗ್ರಚಿತ್ತದಿಂದ ಅಭ್ಯಸಿಸಿದಲ್ಲಿ ಮಾತ್ರ ಅಭಿವೃದ್ಧಿ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು:
ವಸುದೇವಸುತಂ  ದೇವಂ

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಂ  

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ನೂತನ ವ್ಯವಹಾರ ಆರಂಭಿಸುವವರಿಗೆ ಅವಕಾಶ ಒದಗಿಬರುತ್ತದೆ. ಕೆಲಸದಲ್ಲಿ ಉತ್ತಮ ಏಳಿಗೆ ಹಾಗೂ ಸ್ಥಾನಮಾನ ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ಕಂಡುಬರುತ್ತದೆ.  ದೇಹದಲ್ಲಿ ಉಷ್ಣತೆ, ಜ್ವರ, ತಲೆನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣಗಳ ಸಂದರ್ಭದಲ್ಲಿ ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ, ಆಲಸ್ಯ ಬಿಟ್ಟು ಮುಂದುವರಿಯಬೇಕು. ಮಕ್ಕಳ ಓಡಾಟದ ಸಂದರ್ಭದಲ್ಲಿ ಜಾಗರೂಕತೆಯಿಂದ ಇರಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು, ಉತ್ತಮ ಸ್ಥಾನಮಾನ ದೊರೆಯುವುದು. ಅಧಿಕ ಖರ್ಚುವೆಚ್ಚ ಒದಗಿ ಬರುತ್ತದೆ. ಆದುದರಿಂದ ಜಾಗರೂಕತೆಯಿಂದ ವ್ಯವಹರಿಸಿ.  ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ವಾಹನ ಪ್ರಯಾಣದ ಸಂದರ್ಭದಲ್ಲಿ, ಮಕ್ಕಳ ಓಡಾಡದ ಸಂದರ್ಭದಲ್ಲಿ ಜಾಗರೂಕತೆಯಿಂದ ಇರಬೇಕು. ಸಣ್ಣಪುಟ್ಟ ಅನಾರೋಗ್ಯ ಎದುರಿಸಬೇಕಾಗುವ ಸಂದರ್ಭ ಒದಗಿಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:

ಸುಬ್ರಮಣ್ಯ-ಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುವುದು. ಅಡುಗೆ, ವ್ಯಾಪಾರ, ಕೃಷಿ ಮುಂತಾದ ವ್ಯವಹಾರ ಮಾಡುವವರಿಗೆ ಉತ್ತಮವಾದ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ.  ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುವುದು. ಗುಹ್ಯರೋಗ, ದೇಹದಲ್ಲಿ ಆಯಾಸ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು:
ಅಖಂಡಮಂಡಲಾಕಾರಂ

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಕಾರ್ಯಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಕೂಡ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಏರ್ಪಡುವುದು,  ಹೆಂಡತಿಯ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಗಳಿದ್ದು ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರುವುದು. ತಾಮ್ರವ್ಯಾಪಾರಸ್ಥರು, ಅಧ್ಯಾಪಕರು, ಮುಂತಾದವರಿಗೆ ಉತ್ತಮ ಏಳಿಗೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು. ಶೀತ, ಜ್ವರ, ಕೆಮ್ಮು, ತಲೆನೋವು, ಮೈ ಕೈ ನೋವು  ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದಾಸೀನತೆಯನ್ನು ಬಿಟ್ಟು ಚುರುಕುತನದಿಂದ, ಶ್ರದ್ಧೆಯಿಂದ ಕೆಲಸ ಮಾಡಿ. ಉತ್ತಮವಾದ ಆರ್ಥಿಕ ಮುನ್ನಡೆ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಉಷ್ಣ, ಅಜೀರ್ಣ, ತಲೆನೋವು, ಜ್ವರ, ತೊಂದರೆಗಳನ್ನು ಎದುರಿಸಬೇಕಾಗುವುದರಿಂದ ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}