|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

22.01.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ /

ಪ್ರತಿಪತ್/ ದ್ವಿತೀಯ ತಿಥಿ /
ಮಂಗಳವಾರ /  ಆಶ್ಲೇಷ ನಕ್ಷತ್ರ /

ದಿನಾಂಕ:  22.01.2019

 °~•~°~•~°~•~°~•~°~•~°

ಮೇಷ

ಉದ್ಯೋಗ, ವ್ಯಾವಹಾರಿಕ ಕ್ಷೇತ್ರಗಳಲ್ಲಿ ನಿಧಾನಗತಿಯ ಮುನ್ನಡೆ. ನೂತನ ಕಾರ್ಯವೈಖರಿಯಿಂದ ಜನರ ಮೆಚ್ಚುಗೆ. ಆರ್ಥಿಕ ವ್ಯವಸ್ಥೆಯಲ್ಲಿ ಮಂದಗತಿಯ ಮುನ್ನಡೆ. ಬಂಧುಗಳ ಆಗಮನದಿಂದ ಸಂತೋಷ. ಶ್ವಾಸ ಸಂಬಂಧಿ, ರಕ್ತ ಸಂಬಂಧಿ ತೊಂದರೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

ವ್ಯಾವಹಾರಿಕ ಕಾರ್ಯಕ್ಷೇತ್ರದಲ್ಲಿ ಉನ್ನತಿ. ನೂತನ ಕ್ಷೇತ್ರಗಳಲ್ಲಿ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಅವಕಾಶ. ಹಣಕಾಸಿನ ವಿಚಾರದಲ್ಲಿ ಮುನ್ನಡೆ. ಸಹೋದರನ ಸಹಾಯ ಸಂತಸವನ್ನು ತರುವುದು. ದಾಂಪತ್ಯ ಸುಖವನ್ನೂ ಅನುಭವಿಸುವಿರಿ. ಯುವಕ-ಯುವತಿಯರಿಗೆ ವಿವಾಹ ಭಾಗ್ಯ ಒದಗಿಬರುವುದು. ಆರೋಗ್ಯದಲ್ಲಿ  ನಿಧಾನಗತಿಯ ಮುನ್ನಡೆಯನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಉತ್ತಮವಾದ ಮುನ್ನಡೆ ಇರುತ್ತದೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಹಿನ್ನಡೆ ಕಂಡುಬರುವುದು. ನಿಮ್ಮ ಉದಾಸೀನತೆಯಿಂದ ಕೆಲಸ ಕಾರ್ಯಗಳಲ್ಲಿ ಕಷ್ಟವನ್ನು ಎದುರಿಸುತ್ತೀರಿ. ಹಣಕಾಸಿನ ವಿಚಾರದಲ್ಲಿ ತಕ್ಕಮಟ್ಟಿನ ಮುನ್ನಡೆ ದೊರೆಯುತ್ತದೆ. ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾದೀತು. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ ಪಡೆಯುವಿರಿ. ಶ್ವಾಸ ಸಂಬಂಧಿ, ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಆಲಸ್ಯತನವನ್ನು ಬಿಟ್ಟು ಮುಂದುವರಿದಲ್ಲಿ ಉತ್ತಮವಾದ ಏಳಿಗೆಯು ಕಂಡುಬರುತ್ತದೆ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

ಉದ್ಯೋಗ, ವ್ಯಾವಹಾರಿಕ ಕ್ಷೇತ್ರಗಳಲ್ಲಿ ಉತ್ತಮವಾದ ಮುನ್ನಡೆ ಕಂಡುಬರುತ್ತದೆ. ಸಣ್ಣ ಮಟ್ಟಿನ ಪದವಿ ಬದಲಾವಣೆಯನ್ನು ಕಾಣಬಹುದು. ಗುರುಹಿರಿಯರಿಂದ ಪ್ರಶಂಸೆಗಳು ಒದಗಿಬರುವುದು. ದಾಂಪತ್ಯ ಜೀವನದಲ್ಲಿ ಸಣ್ಣ ಬಿರುಕುಗಳು ಕಂಡುಬರುವ ಲಕ್ಷಣಗಳಿದ್ದು, ಮೂರನೆಯವರ ಮಾತನ್ನು ಕೇಳಬೇಡಿ. ಶೀತಜ್ವರ, ಮೈ ಕೈ ನೋವು ಕಂಡುಬರುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಮುನ್ನಡೆಯನ್ನು ಕಾಣುವಿರಿ. ನಿಮ್ಮ ಕಾರ್ಯದಲ್ಲಿ ಹಿರಿಯ ಅಧಿಕಾರಿಗಳಿಂದ ತೊಂದರೆಗಳನ್ನು ಅನುಭವಿಸಬೇಕಾದ ಪರಿಸ್ಥಿತಿ ಒದಗಿಬರುವುದು. ಆರ್ಥಿಕ ವಿಚಾರದಲ್ಲಿ ಸಣ್ಣ ಮಟ್ಟಿನ ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಇದೆ. ದಾಂಪತ್ಯ ಜೀವನದಲ್ಲಿ ಸುಖ ಅನುಭವಿಸುವಿರಿ. ಆರೋಗ್ಯದಲ್ಲಿ ಸಣ್ಣ ಮಟ್ಟಿನ ತೊಂದರೆ ಎದುರಾದರೂ ಕೂಡ ನೆಮ್ಮದಿಯನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಹಿನ್ನಡೆ ಕಾಣುವುದು, ಉತ್ತಮ ಪರಿಶ್ರಮದ ಅಗತ್ಯವಿದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


  ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಪಡೆಯುವಿರಿ. ಕೈಗೆತ್ತಿಕೊಂಡ ಕೆಲಸವು ಅರ್ಧದಲ್ಲಿ ನಿಲ್ಲುವ  ಸಂಭವವು ಇರುವುದರಿಂದ ಜಾಗರೂಕರಾಗಿರಬೇಕು. ಆರ್ಥಿಕ ವ್ಯವಸ್ಥೆಯಲ್ಲಿ ತೊಡಕುಗಳು ಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾದೀತು. ಆರೋಗ್ಯದಲ್ಲಿ ಹಿನ್ನಡೆ ಕಾಣುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುವುದು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆಯನ್ನು  ಪಡೆಯುವಿರಿ. ನಿಮ್ಮ ಉನ್ನತಿಯನ್ನು ಕಂಡು ಅಸೂಯೆ ಪಡುವಂಥವರು ಬಹಳ ಮಂದಿ ಇರುವುದರಿಂದ ಜಾಗರೂಕರಾಗಿರಬೇಕು. ಆರ್ಥಿಕ ವ್ಯವಸ್ಥೆಯಲ್ಲಿ ಕೂಡ ಮುನ್ನಡೆಯನ್ನು ಕಾಣುವಿರಿ. ದಾಂಪತ್ಯ ಜೀವನದಲ್ಲಿ ಸಣ್ಣ ಕಲಹವನ್ನು ಎದುರಿಸಬೇಕಾದೀತು. ಆರೋಗ್ಯದಲ್ಲಿ ಸಣ್ಣ ಮಟ್ಟಿನ ಹಿನ್ನಡೆಯನ್ನು ಕಾಣುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಇದ್ದು ಉತ್ತಮ ಫಲಿತಾಂಶ ದೊರೆಯುವುದು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


 ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಹಿನ್ನಡೆಯನ್ನು ಪಡೆಯುವಿರಿ. ಅಧಿಕಾರಿಗಳಿಂದ ಅಸಮಾಧಾನದ ಮಾತನ್ನು ಕೇಳಬೇಕಾಗುತ್ತದೆ. ಆರ್ಥಿಕ ವ್ಯವಸ್ಥೆಯಲ್ಲಿ ತೊಂದರೆಗಳು ಕಂಡುಬರುವುದು. ಮಗನಿಂದ ವ್ಯವಹಾರಕ್ಕೆ ಹಣ ದೊರೆಯುವುದು. ದಾಂಪತ್ಯ ಜೀವನದಲ್ಲಿ ಸುಖ ಕಾಣುವಿರಿ. ಆರೋಗ್ಯದಲ್ಲಿ  ಹಿನ್ನಡೆ ಕಾಣುವಿರಿ. ವಿದ್ಯಾರ್ಥಿಗಳಿಗೆ ಆಲಸ್ಯತನವನ್ನು ಬಿಟ್ಟಲ್ಲಿ ಮಾತ್ರ ಉತ್ತಮವಾದ ಏಳಿಗೆ ದೊರೆಯುತ್ತದೆ.



ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


  ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮಂದಗತಿಯನ್ನು ಕಾಣುವಿರಿ. ಉತ್ತಮ ಮನಸ್ಸಿನಿಂದ ಶ್ರದ್ಧೆಯಿಂದ

ಕಾರ್ಯದಲ್ಲಿ ಮುಂದುವರಿದಲ್ಲಿ ಮಾತ್ರ ವ್ಯವಹಾರ ಸಫಲವಾದೀತು. ಆರ್ಥಿಕ ವ್ಯವಸ್ಥೆಯಲ್ಲಿ ನಿಧಾನಗತಿಯ ಮುನ್ನಡೆಯನ್ನು ಕಾಣುವಿರಿ. ದಾಂಪತ್ಯ ಜೀವನದಲ್ಲಿ ಸಣ್ಣ ಮಟ್ಟಿನ ಕಲಹಗಳು ಕಂಡುಬರುವ ಸಾಧ್ಯತೆಗಳಿದ್ದು ಅನುಮಾನಕ್ಕೆ ಎಡೆ ಮಾಡಿಕೊಡಬೇಡಿ. ಆರೋಗ್ಯದಲ್ಲಿ ಹಿನ್ನಡೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಮಂದಗತಿಯ ಮುನ್ನಡೆ ಕಂಡುಬರುತ್ತದೆ.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮವಾದ ಮುನ್ನಡೆಯನ್ನು ಪಡೆಯಿರಿ. ಗುರು ಹಿರಿಯರಿಂದ ಪ್ರಶಂಸೆಗಳು ಒದಗಿಬರುವುದು. ಕೃಷಿಕ್ಷೇತ್ರದಲ್ಲಿ ಉತ್ತಮ ಫಲ ದೊರೆಯುವುದು. ಆರ್ಥಿಕ ವ್ಯವಸ್ಥೆಯಲ್ಲಿ ಹಿನ್ನಡೆ ಕಂಡುಬಂದರೂ ಕೂಡ ಹಿರಿಯರಿಂದ ಸಹಾಯ ಒದಗಿ ಬರುತ್ತದೆ. ಗಂಟು ನೋವುಗಳು, ಮಲಬದ್ದತೆ ಮುಂತಾದ ತೊಂದರೆ ಕಂಡುಬರುತ್ತದೆ. ದಾಂಪತ್ಯದಲ್ಲಿ ಸುಖ ಕಾಣುವಿರಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


  ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ ಕಾಣುವಿರಿ. ಆರ್ಥಿಕ  ಏಳಿಗೆ ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಕಲಹ ಕಂಡುಬರುತ್ತದೆ. ಶೀತ ಜ್ವರ ಮೊದಲಾದ ತೊಂದರೆಗಳು ಕಂಡುಬರುತ್ತವೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ  ಕಂಡುಬಂದರೂ ಕೂಡ ನಿಮ್ಮ ಆಲಸ್ಯತನದಿಂದ ಅವಕಾಶವನ್ನು ಕಳೆದುಕೊಳ್ಳುವಿರಿ. ಹಿರಿಯ ಅಧಿಕಾರಿಗಳಿಂದ ತೊಂದರೆ ಬರುತ್ತದೆ. ಆರ್ಥಿಕವಾಗಿ ಮುನ್ನಡೆಯುವಿರಿ. ಗುರುಹಿರಿಯರ ಪ್ರಶಂಸೆಗೆ  ಭಾಗಿಯಾಗುವಿರಿ. ದಾಂಪತ್ಯದಲ್ಲಿ ಸುಖ ಕಾಣುವಿರಿ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ ಕಾಣುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}