|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

17.03.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ /ಏಕಾದಶಿ ತಿಥಿ /

ರವಿವಾರ/ ಪುಷ್ಯಾ ನಕ್ಷತ್ರ/

ದಿನಾಂಕ: 17.03.2019

 °~•~°~•~°~•~°~•~°~•~°

ಮೇಷ

        ಭೂ ಸಂಬಂಧಿ ಕೆಲಸ ಮಾಡುವವರು, ಕೃಷಿಕರು, ವಾಹನ ಚಾಲಕರು, ಆರಕ್ಷಕರು,ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಕೆಲಸ ಕಾರ್ಯಗಳಲ್ಲಿ ಶ್ರದ್ಧೆಯಿಂದ ಮುನ್ನಡೆಯಿರಿ.  ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧಿ ತೊಂದರೆ, ಶ್ವಾಸ ಕ್ಕೆ ಸಂಬಂಧಪಟ್ಟ ತೊಂದರೆ, ಅಲರ್ಜಿ ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಸಂಗೀತ, ನಾಟ್ಯ, ಆಟೋಟಗಳನ್ನು ಕಲಿಯುವವರಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಅಡೆತಡೆ ಎದುರಿಸಬೇಕಾಗುತ್ತದೆ. ವೃಥಾ ಆಪಾದನೆಯನ್ನು  ಎದುರಿಸಬೇಕಾಗುತ್ತದೆ. ತಾವು ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ಖರ್ಚುವೆಚ್ಚಗಳು ಬರುತ್ತದೆ. ದಾಂಪತ್ಯ ಜೀವನದಲ್ಲಿ  ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೂತ್ರ ಸಂಬಂಧಿ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಉತ್ತಮವಾಗಿ ನೀರನ್ನು ಕುಡಿಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತಮ್ಮ ಆಲಸ್ಯದಿಂದ ಆಗಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡುಬರುತ್ತದೆ. ಕಷ್ಟ ನಷ್ಟವನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದ ಏಳಿಗೆ ಗೋಸ್ಕರ ವಾಗಿ ಹಣವನ್ನು ವಿನಿಯೋಗಿಸಿ. ಸಂಸಾರದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದಿರಿ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ವಾತ,  ರಕ್ತ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ. ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉತ್ತಮ ಸ್ಥಾನಮಾನ, ಗೌರವ, ಹಾಗೂ ಉತ್ತಮ ಅಭಿವೃದ್ಧಿ ಕಾರ್ಯಕ್ಷೇತ್ರದಲ್ಲಿ ಕಂಡುಬರುತ್ತದೆ. ಕೃಷಿಕರಿಗೆ ಉತ್ತಮ ಬೆಳೆ ಒದಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ಉತ್ತಮ ಪರಿಶ್ರಮದಿಂದ ಹಾಗೂ ಶ್ರದ್ಧೆಯಿಂದ ಕೆಲಸವನ್ನು ತೊಡಗಿಸಿಕೊಂಡರೆ ಮಾತ್ರ ಅಭಿವೃದ್ಧಿ ಕಂಡು ಬರುವುದು. ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯ ಕೋಸ್ಕರ ವಿನಿಯೋಗಿಸಿ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ಉತ್ತಮ ಶ್ರದ್ಧೆಯಿಂದ ವಿದ್ಯಾರ್ಥಿಗಳು ಮುನ್ನಡೆಯಬೇಕು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ರಾಜಕಾರಣಿಗಳು, ವೈದ್ಯರು, ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉತ್ತಮ ಹಣ ಸಂಪಾದನೆಯಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಬೇಕು. ಮೈ ಕೈ ಗಂಟು ನೋವು, ಹೊಟ್ಟೆ ನೋವು, ತಲೆನೋವು, ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದರೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಭೂ ಸಂಬಂಧಿ ವ್ಯವಹಾರ, ಕೃಷಿಕರು, ಹಾಗೂ ನೀರಿಗೆ ಸಂಬಂಧಪಟ್ಟ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಆರ್ಥಿಕವಾದ ಮುನ್ನಡೆ ದೊರೆಯುತ್ತವೆ. ಶ್ವಾಸಕ್ಕೆ ಸಂಬಂಧಪಟ್ಟ ತೊಂದರೆ, ಹೊಟ್ಟೆಗೆ ಸಂಬಂಧಪಟ್ಟ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ವೈದ್ಯರಿಗೆ ಉತ್ತಮ  ಏಳಿಗೆ ಕಂಡುಬರುವುದು. ಆರ್ಥಿಕವಾದ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ಕುಟುಂಬದಲ್ಲಿ ಕಲಹ ಏರ್ಪಡುತ್ತದೆ. ಪಿತ್ತ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಶ್ರದ್ಧೆಯಿಂದ ತಮ್ಮ ಕೆಲಸವನ್ನು  ಮಾಡಿದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.ತಮ್ಮ ಆಲಸ್ಯತನ ದಿಂದಾಗಿ ವ್ಯವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಏಳಿಗೆ ಕಂಡುಬರುವುದು. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಮುನ್ನಡೆಯನ್ನು ಹೊಂದುತ್ತಾರೆ


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉತ್ತಮ ಸ್ಥಾನಮಾನ ಗೌರವ ಉತ್ತಮ ಅಭಿವೃದ್ಧಿ ವ್ಯಾವಹಾರಿಕಕ್ಷೇತ್ರದಲ್ಲಿ ಲಭಿಸುತ್ತದೆ. ಆರ್ಥಿಕವಾಗಿ  ನಿಧಾನಗತಿಯ ಏಳಿಗೆ ಕಂಡು ಬರುವುದು. ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ.ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆಹಾರದ ಮೂಲಕವಾಗಿ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ನಿಯಂತ್ರಣವಿರಲಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡು ಬರುತ್ತದೆ



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಸನ್ನಡತೆ ಯಿಂದಾಗಿ ಜನರ ಮೆಚ್ಚುಗೆಗೆ ಪಾತ್ರರಾಗುವಿರಿ. ವ್ಯವಹಾರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ  ದೊರೆಯುತ್ತದೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ನಿಮ್ಮ ಅಶ್ರದ್ಧೆ,  ಆಲಸ್ಯತನ ನಿಮ್ಮ ಕೆಲಸ ಕಾರ್ಯಗಳಿಗೆ ಹಿನ್ನಡೆ ಒದಗಿಸುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಹಿನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}