|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

31.03.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ಏಕಾದಶಿ ತಿಥಿ /

ರವಿವಾರ/ಶ್ರವಣ ನಕ್ಷತ್ರ/

ದಿನಾಂಕ: 31.03.2019

 °~•~°~•~°~•~°~•~°~•~°

ಮೇಷ

        ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಸ್ಥಾನಮಾನಗಳು  ದೊರೆಯುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರೆದಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ನಿಮ್ಮ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದಲ್ಲಿ  ಕಲಹಗಳು ಆಗುವ ಸಂಭವ ಇರುವುದರಿಂದ ಜಾಗರೂಕತೆಯಿಂದ ಇರಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಇದಿರಾಗುತ್ತದೆ. ಜ್ವರ ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಮಾಡುವ ಕೆಲಸದಲ್ಲಿ ಏಕಾಗ್ರತೆಯಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ  ತೊಂದರೆಗಳು ಎದುರಾಗುತ್ತದೆ. ಪಿತ್ತ ಸಂಬಂಧವಾದ ತೊಂದರೆ, ರಕ್ತ ಹಾಗೂ ನರಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು. ವಾಹನ ಪ್ರಯಾಣಗಳ ಸಂದರ್ಭದಲ್ಲಿ ಜಾಗರೂಕರಾಗಿರಬೇಕು ಹಾಗೂ ಮಕ್ಕಳ ಹೋರಾಟದ ಸಂದರ್ಭದಲ್ಲಿ  ಜಾಗರೂಕರಾಗಿರಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ನೂತನ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಮೈ ಕೈ ಗಂಟು  ನೋವು, ನರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

 ಯಾವುದೇ ಕೆಲಸವನ್ನು ಕೈಗೊಂಡರು ಕೂಡ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ  ಏಳಿಗೆ ಕಂಡುಬರುವುದು. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ನೂತನ ವಿವಾಹ ಯೋಗ ಬರುವುದು. ಶೀತ ಜ್ವರ, ಹೊಟ್ಟೆಗೆ ಸಂಬಂಧಿಸಿದ ತೊಂದರೆ ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಪರಿಶ್ರಮದಿಂದ ವಿದ್ಯಾರ್ಥಿಗಳು ಮುನ್ನಡೆಯಬೇಕು, ಟಿವಿ ಮೊದಲಾದವುಗಳಿಂದ ದೂರವಿದ್ದಷ್ಟು ಒಳ್ಳೆಯದು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ ||

    °~•~°~•~°~•~°~•~°~•~°      


ಕನ್ಯಾ


     ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ವಿಘ್ನ ಗಳು ಕಂಡು ಬರುತ್ತದೆ.  ಮೇಲಿನ ಅಧಿಕಾರಿಗಳಿಂದ ಸಮಾಧಾನದ ಮಾತುಗಳು ಕೇಳಿ ಬರುವುದು. ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಕೈ ಗಂಟುಗಳು ನೋವು, ದೇಹದಲ್ಲಿ ಉಷ್ಣ, ಕಣ್ಣು ನೋವು, ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಮಾಡುವಂತಹ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ. ನೂತನ ವಾಹನ ಯೋಗ,  ಭೂಮಿ ಲಾಭ, ಗೃಹ ಉಪಯೋಗ ವಸ್ತುಗಳ ಖರೀದಿ ಮೊದಲಾದ ಅವಕಾಶಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡುಬರುವುದು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ.  ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು, ಉತ್ತಮ ಕಾರ್ಯಗಳಿಗೆ ಹಣವನ್ನು ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆದಲ್ಲಿ ಉತ್ತಮ ಏಳಿಗೆ  ಕಂಡುಬರುತ್ತದೆ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡ ಕೆಲಸ ಕಾರ್ಯಗಳು ಯಶಸ್ಸಿನ ಹಾದಿಯನ್ನು ಹಿಡಿಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಪಿತ್ತ ಸಂಬಂಧಿ  ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಕೆಲಸ ಕಾರ್ಯದಲ್ಲಿ  ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.  ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


       ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಅಭಿವೃದ್ಧಿ ಸ್ಥಾನಮಾನ ಗೌರವಗಳು ಕಾರ್ಯಕ್ಷೇತ್ರಗಳಲ್ಲಿ ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ದೇಹದಲ್ಲಿ ಉಷ್ಣತೆ,  ಆಹಾರದಲ್ಲಿ ವ್ಯತ್ಯಾಸ, ತಾಯಿಯ ಆರೋಗ್ಯದಲ್ಲಿ ತೊಂದರೆ ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}