ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ದ್ವಾದಶಿ/ತ್ರಯೋದಶಿ ತಿಥಿ /
ಮಂಗಳವಾರ/ಶತಭಿಷಾ ನಕ್ಷತ್ರ/
ದಿನಾಂಕ: 02.04.2019
°~•~°~•~°~•~°~•~°~•~°
ಮೇಷ
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಆರ್ಥಿಕವಾದ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಪುತ್ರನ ಆಗಮನದಿಂದ ಸಂತಸ, ಮನ ಶಾಂತಿ ದೊರೆಯುತ್ತದೆ. ಚರ್ಮ ಸಂಬಂಧಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಧರಣೀಗರ್ಭಸಂಭೂತಮ್ ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ ಮಂಗಲಮ್ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ವೃಷಭ
ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ. ಸ್ಥಾನ ಮಾನ ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು, ಮಕ್ಕಳು ಓಡಾಡುವ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು.
ಪರಿಹಾರ
ಶುಕ್ರ ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ ಶುಭ.
ಜಪಿಸಲು :
ಹಿಮಕುಂದ ಮೃಣಾಲಾಭಂ (ಸಮಾಭಾಸಂ) ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಮ್ | ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ಮಿಥುನ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡಿದರೂ ಕೂಡ ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತವ, ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮೈ ಕೈ ಗಂಟು ನೋವು, ಹೊಟ್ಟೆ ನೋವು, ನರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಬುಧ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಪ್ರಿಯಂಗು-ಕಲಿಕಾಶ್ಯಾಮಮ್ ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಮ್ ಪ್ರಣಮಾಮ್ಯಹಮ್ || |
°~•~°~•~°~•~°~•~°~•~°
ಕರ್ಕಾಟಕ
ವ್ಯಾವಹಾರಿಕವಾದ ಹಿನ್ನಡೆಯನ್ನು ಎದುರಿಸಬೇಕಾಗುತ್ತದೆ. ಮೋಸ ಹೋಗುವಂತಹ ಸಾಧ್ಯತೆಗಳಿರುವುದರಿಂದ ಜಾಗರೂಕತೆಯಿಂದ ವ್ಯವಹಾರವನ್ನು ನಡೆಸಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಮೈ ಕೈ ಗಂಟು ನೋವು, ಹೊಟ್ಟೆ ನೋವು,ನರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು
ಜಪಿಸಲು :
ದಧಿಶಂಖತುಷಾರಾಭಮ್ ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ ಶಂಭೋರ್ಮುಕುಟಭೂಷಣಮ್ ||
°~•~°~•~°~•~°~•~°~•~°
ಸಿಂಹ
ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮವಾದ ಅವಕಾಶಗಳು ದೊರೆಯಲಿದೆ, ವ್ಯಾಪಾರಸ್ಥರಿಗೆ ಉತ್ತಮ ಲಾಭ, ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ರವಿ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಜಪಾಕುಸುಮ-ಸಂಕಾಶಂ ಕಾಶ್ಯಪೇಯಮ್ ಮಹಾದ್ಯುತಿಮ್ |
ತಮೋಽರೀಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ ||
°~•~°~•~°~•~°~•~°~•~°
ಕನ್ಯಾ
ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಎದುರಾಗುತ್ತವೆ. ತಾವು ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಶೀತ ಜ್ವರ, ತಲೆನೋವು ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ವಂದೇ ವೃಂದಾವನಚರಮ್ ವಲ್ಲವೀಜನವಲ್ಲಭಮ್
ಜಯಂತೀ ಸಂಭವಂ ಧಾಮ ವೈಜಯಂತೀ ವಿಭೂಷಣಮ್ ||
°~•~°~•~°~•~°~•~°~•~°
ತುಲಾ
ಉತ್ತಮ ಶ್ರದ್ಧೆಯಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ಹಿರಿಯ ಅಧಿಕಾರಿಗಳಿಂದ ಕಾರ್ಯಕ್ಷಮತೆಯನ್ನು ಮೆಚ್ಚಿ ಪ್ರಶಂಸನಾ ಮಾತುಗಳು ಕೇಳಿ ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ನರ ಸಂಬಂಧಿ ತೊಂದರೆಯನ್ನು, ರಕ್ತ ಸಂಬಂಧಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಆಲಸ್ಯತನವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಆಲಸ್ಯತನ ವನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಕೆಲಸವನ್ನು ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ
ಜಪಿಸಲು :
ದೇವಾನಾಂ ಚ ಋಷೀಣಾಂ ಚ ಗುರುಮ್ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ ||
°~•~°~•~°~•~°~•~°~•~°
ಮಕರ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಕುಟುಂಬದಲ್ಲಿ ಉತ್ತಮ ಮನಃಶಾಂತಿ ನೆಲೆಗೊಳ್ಳುತ್ತದೆ. ಶ್ವಾಸ ಸಂಬಂಧಿ ತೊಂದರೆ ಶ್ವಾಸ ಸಂಬಂಧಿ ತೊಂದರೆ, ಅಲರ್ಜಿ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.
ಜಪಿಸಲು :
ನೀಲಾಂಜನ-ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್||
°~•~°~•~°~•~°~•~°~•~°
ಕುಂಭ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ, ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಶೀತ ಜ್ವರ, ತಲೆನೋವು ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಆಲಸ್ಯತನ ವನ್ನು ಬಿಟ್ಟು ಏಕಾಗ್ರತೆಯಿಂದ ಕೆಲಸವನ್ನು ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ನಮಸ್ತೇ ಪುಂಡರೀಕಾಕ್ಷ ನಮಸ್ತೇ ಪುರುಷೋತ್ತಮ
ನಮಸ್ತೇ ಸರ್ವಲೋಕಾತ್ಮನ್ ನಮಸ್ತೇ ತಿಗ್ಮಚಕ್ರಿಣೇ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}