ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ದ್ವಿತೀಯ ತಿಥಿ /
ರವಿವಾರ/ಅಶ್ವಿನಿ/ಭರಣಿ ನಕ್ಷತ್ರ/
ದಿನಾಂಕ: 07.04.2019
°~•~°~•~°~•~°~•~°~•~°
ಮೇಷ
ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ. ನೂತನ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಚರ್ಮ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ವೃಷಭ
ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು. ಕುಟುಂಬದಲ್ಲಿ ಕಲಹ ಸಂಭವಿಸುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೂತ್ರ ಸಂಬಂಧಿ ತೊಂದರೆಗಳು, ತಲೆನೋವು, ಕತ್ತು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಕ್ಕಳು ಓಡಾಡುವ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು.
ಪರಿಹಾರ
ಶುಕ್ರ ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ ಶುಭ.
ಜಪಿಸಲು :
ಹಿಮಕುಂದ ಮೃಣಾಲಾಭಂ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ಮಿಥುನ
ಮಾಡುವಂತಹ ಕೆಲಸ ಕಾರ್ಯಗಳನ್ನು ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಸಿರಿ. ಆರ್ಥಿಕವಾದ ಬೆಳವಣಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ರಕ್ತಸಂಬಂಧಿ ತೊಂದರೆಗಳು, ವಿಪರೀತ ಕೋಪ, ಪಿತ್ತ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು, ಮಕ್ಕಳು ಓಡಾಡುವ ಸಂದರ್ಭಗಳಲ್ಲಿ ಜಾಗರೂಕತೆ ವಹಿಸಬೇಕು.
ಪರಿಹಾರ
ಬುಧ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ | ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ | ತಂ ಬುಧಮ್ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ಕರ್ಕಾಟಕ
ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ, ಭೂಮಿಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವು, ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿಕಂಡುಬರುವುದು
ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು
ಜಪಿಸಲು :
ದಧಿಶಂಖತುಷಾರಾಭಮ್ | ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||
°~•~°~•~°~•~°~•~°~•~°
ಸಿಂಹ
ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ನೂತನ ವ್ಯವಹಾರ ಕೋಸ್ಕರ ವಾಗಿ ಹಣವನ್ನು ವಿನಿಯೋಗಿಸಬೇಕಾದೀತು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು ಹೊಟ್ಟೆ ನೋವು ಅದು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ರವಿ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||
°~•~°~•~°~•~°~•~°~•~°
ಕನ್ಯಾ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಆರ್ಥಿಕ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||
°~•~°~•~°~•~°~•~°~•~°
ತುಲಾ
ಕೃಷಿಕರಿಗೆಉತ್ತಮ ಬೆಳೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ದೂರ ಪ್ರಯಾಣ ಮಾಡಬೇಕಾದ ಅಂತ ಪರಿಸ್ಥಿತಿ ಒದಗಿ ಬರುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ತೊಡಗಿಸಿಕೊಳ್ಳುವ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುವುದು, ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುತ್ತದೆ. ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಆಲಸಿ ತನವನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಮಾತ್ರ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು . ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ
ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||
°~•~°~•~°~•~°~•~°~•~°
ಮಕರ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.
ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||
°~•~°~•~°~•~°~•~°~•~°
ಕುಂಭ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ, ಅಡುಗೆಯವರು, ಆಹಾರ ಸಂಬಂಧಿ ಕೆಲಸವನ್ನು ಮಾಡುವವರು ಮುಂತಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್ | ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಆಲಸ್ಯತನ ವನ್ನು ಬಿಟ್ಟು ಮುಂದುವರೆದಲ್ಲಿ ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುತ್ತದೆ
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}