ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಕೃಷ್ಣ ಪಕ್ಷ /ನವಮಿ ತಿಥಿ /
ರವಿವಾರ/ಧನಿಷ್ಠಾ ನಕ್ಷತ್ರ/
ದಿನಾಂಕ: 28.04.2019
°~•~°~•~°~•~°~•~°~•~°
ಮೇಷ
ನೂತನ ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮರೋಗ ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.
ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ವೃಷಭ
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯ ಭಾಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಶುಕ್ರ ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ ಶುಭ.
ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ಮಿಥುನ
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿಯನ್ನು ಪಡೆಯುತ್ತೀರಿ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದುಂದು ವೆಚ್ಚವನ್ನು ಮಾಡದಿರಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ
ಬುಧ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ | ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ ಪ್ರಣಮಾಮ್ಯಹಮ್ ||
°~•~°~•~°~•~°~•~°~•~°
ಕರ್ಕಾಟಕ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ವ್ಯಾಪಾರಸ್ಥರಿಗೆ ಉತ್ತಮ ಲಾಭ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.
ಜಪಿಸಲು :
ದಧಿಶಂಖತುಷಾರಾಭಮ್ | ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||
°~•~°~•~°~•~°~•~°~•~°
ಸಿಂಹ
ಸರಕಾರಿ ಕೆಲಸದಲ್ಲಿ ಇರುವವರಿಗೆ ಉತ್ತಮ ಏಳಿಗೆ ಕಂಡು ಬರಬಹುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ, ತಲೆನೋವು, ಕಣ್ಣು ನೋವು, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುವುದರಿಂಗ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ರವಿ ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||
°~•~°~•~°~•~°~•~°~•~°
ಕನ್ಯಾ
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆಯನ್ನು ಪಡೆಯುತ್ತಾರೆ.
ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ತಲೆನೋವು, ಕತ್ತು ನೋವು, ಬೆನ್ನು ನೋವು, ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುತ್ತದೆ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ದುಂದು ವೆಚ್ಚವನ್ನು ಮಾಡದಿರಿ. ದಾಂಪತ್ಯ ಜೀವನದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಮೋಸ ಹೋಗುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಯು ಕೂಡ ಜಾಗರೂಕರಾಗಿರಿ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||
°~•~°~•~°~•~°~•~°~•~°
ಮಕರ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.
ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್ ||
°~•~°~•~°~•~°~•~°~•~°
ಕುಂಭ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ ಹಾಗೂ ಉತ್ತಮ ಕಾರ್ಯಗಳಿಗೆ ಓಸ್ಕರ ವಾಗಿ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ, ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್ | ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}