ನಂತೂರು: ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ 15-08-2026 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ದಿವಾಣ ಗೋವಿಂದ ಭಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಮಾತನಾಡಿ, ವಿದ್ಯಾರ್ಥಿಗಳು ಸ್ವಾತಂತ್ರ್ಯದ ಮೌಲ್ಯವನ್ನು ಅರಿತು ಬಾಳಬೇಕು ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಪಾತ್ರವು ಮಹತ್ತ್ವಪೂರ್ಣವಾದದ್ದು ಎಂದು ತಿಳಿಸಿದರು.
ಸೇವಾ ಸಮಿತಿ ಕಾರ್ಯಾಲಯ ಕಾರ್ಯದರ್ಶಿ ಎಮ್. ಟಿ. ಭಟ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷ ಯೋಗೀಶ್ ಕುಮಾರ್, ಕಾರ್ಯದರ್ಶಿ ಹರೀಶ್ ಉಜ್ಜೋಡಿ, ಸದಸ್ಯರು, ಪ್ರಾಂಶುಪಾಲ ಸಂದೀಪ್ ಆಚಾರ್ಯ ಉಪಸ್ಥಿತರಿದ್ದರು.
ಪ್ರಥಮ ಪಿ. ಯು. ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಜೀವನ್ ಸ್ವಾತಂತ್ರ್ಯೋತ್ಸವದ ಮಹತ್ತ್ವವನ್ನು ತಿಳಿಸಿದರು. ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣಗಳು ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.



